Thursday, October 16, 2025
Google search engine
Homeಜಿಲ್ಲಾಹಕ್ಕಿ ಪೀಕ್ತಿ ಜನರಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹ
spot_img

ಹಕ್ಕಿ ಪೀಕ್ತಿ ಜನರಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹ

ಬೆಳಗಾವಿ :ಖಾನಾಪುರ ತಾಲೂಕಿನ ಗುಂಜಿ ಗ್ರಾಮದಲ್ಲಿ ವಾಸಿಸುತ್ತಿರುವ ಹಕ್ಕಿ ಪೀಕ್ತಿ ಜನರಿಗೆ ಜಾತಿ ಪ್ರಮಾಣಪತ್ರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ಭೀಮ ಪ್ರಜಾ ಸಂಘಟನೆ ವತಿಯಿಂದ ಮಂಗಳವಾರ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು .

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪಶುವೈದ್ಯಕೀಯ ಚೀಟಿ, ಮನೆ, ಮಕ್ಕಳಿಗೆ ಶಾಲೆ, ಅಂಗನವಾಡಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಕಳೆದ 60 ವರ್ಷಗಳಿಂದ ಕಾಡಿನಲ್ಲಿ ವಾಸಿಸುತ್ತಿದ ನಮಗೆ ಯಾವುದೇ ಸೌಲಭ್ಯ ಸರ್ಕಾರ ನೀಡಿರುವುದಿಲ್ಲ  ಆದ ಕಾರಣ ಸರ್ಕಾರ ಈ ಇಲ್ಲ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ನಾಗೇಶ ಆದಿವಾಸಿ, ತುಳಸಾಬಾಯಿ ಆದಿವಾಸಿ, ರಾಕೇಶ ಆದಿವಾಸಿ, ಗೋಪಾಲ ಆದಿವಾಸಿ, ಸುಗಂಧ ಆದಿವಾಸಿ, ಅಂಕುಶ ಆದಿವಾಸಿ, ಹನುಮಂತ ಆದಿವಾಸಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

RELATED ARTICLES
- Advertisment -spot_img

Most Popular

error: Content is protected !!