ಬೆಳಗಾವಿ; ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಸ್ಟೇರಿಂಗ್ ಕಟ್ ಆಗಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು 10ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬೆಳಗುಂದಿ ಗ್ರಾಮದಿಂದ ಬೆಳಗಾವಿಗೆ ಕಡೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ,ಮುಂಭಾಗದ ಗಾಜು ನಜ್ಜುಗುಜ್ಜಾಗಿದೆ.ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬಸ್‌ನಲ್ಲಿ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಸಣ್ಣಪುಟ್ಟ ಗಾಯಗೊಂಡ ಗಾಯಾಳುಗಳನ್ನ ಜಿಲ್ಲಾ ಬೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.