ಬೆಳಗಾವಿ : ಚಿಕ್ಕೋಡಿ ತಾಲೂಕು ಹಿರೇಕೋಡಿ ಗ್ರಾಮದಲ್ಲಿರುವ ಶ್ರೀ ಮೊರಾರ್ಜಿ ವಸತಿ ನಿಲಯದಲ್ಲಿ ಉಪಹಾರ ಸೇವಿಸಿ 60 ಕ್ಕಿಂತ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಶುಕ್ರವಾರ ನಡೆದಿದೆ.
ಅಲ್ಪಸಂಖ್ಯಾತರ ಇಲಾಖೆಗೆ ಸೇರಿದ ಶ್ರೀ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಬೆಳಿಗ್ಗೆ ಉಪ್ಪಿಟ್ಟು ಸೇವನೆ ಮಾಡಿದ ಪರಿಣಾಮವಾಗಿ 60 ಕ್ಕಿಂತ ಹೆಚ್ಚು ಮಕ್ಕಳು ಹೊಟ್ಟೆನೋವಿನಿಂದ ಬಳಲುತ್ತಿದ್ದಾರೆ. ಮಕ್ಕಳ ಆರೋಗ್ಯ ಸ್ಥಿರವಾಗಿದೆ. ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ.ಎಸ್ ಎಸ್.ಗಡಾದ ತಿಳಿಸಿದ್ದಾರೆ.
ಬೆಳಿಗ್ಗೆ ಉಪಾಹಾರವಾಗಿ ಉಪ್ಪಿಟ್ಟು ಸೇವಿಸಿದ ಪರಿಣಾಮವಾಗಿ ಈ ಘಟನೆ ನಡೆದಿದೆ. ಆಸ್ಪತ್ರೆಗೆ ಡಿಡಿಪಿಐ ಸೀತಾರಾಮು ಆರ್.ಎಸ್., ಡಾ.ಸುಕುಮಾರ ಬಾಗಾಯಿ ಭೇಟಿ ನೀಡಿದರು. ಶ್ರೀ ಮೊರಾರ್ಜಿ ದೇಸಾಯಿ ವಸತಿ ನಿಲಯದ ಸಿಬ್ಬಂದಿಗಳ ಬೇಜವಾಬ್ದಾರಿಂದ ಈ ಘಟನೆ ನಡೆದಿದೆ ಎಂದು ಪಾಲಕರು ಆರೋಪಿಸಿದ್ದಾರೆ.