ಬೆಳಗಾವಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕರಿಗೆ ನೀಡಲಾಗುತ್ತಿರುವ ರಾಜಾತಿಥ್ಯವನ್ನು ಖಂಡಿಸಿ ರಾಜ್ಯ ಗೃಹ ಸಚಿವರ ರಾಜೀನಾಮೆ ನೀಡುವಂತೆ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ, ಗ್ರಾಮಾಂತರ ಹಾಗೂ ಚಿಕ್ಕೋಡಿ ಜಿಲ್ಲೆಗಳ ಎಲ್ಲಾ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪಕ್ಷದ ಕಾರ್ಯಕರ್ತರು ಗೃಹ ಸಚಿವರ ರಾಜೀನಾಮೆಯನ್ನು ಆಗ್ರಹಿಸಿದರು. ಈ ಸಂಧರ್ಭದಲ್ಲಿ ಪಕ್ಷದ ಪ್ರಮುಖರು, ಹಿರಿಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
****





