ಬೆಳಗಾವಿ (ಸಮರ್ಥ ನಾಡು): ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಬುಧವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಬಿಡಿಎ ಅಧ್ಯಕ್ಷ, ಶಾಸಕ ಎನ್ ಎ ಹ್ಯಾರಿಸ, ಶಾಸಕ ಅಶೋಕ್ ಪಟ್ಟಣ, ಎಂ ಎಲ್ಸಿ ಚನ್ನರಾಜ ಹಟ್ಟಿಹೊಳಿ, ಕೆಎಸ್ ಸಿಎ ಸೆಕ್ರೆಟರಿ ಸಂತೋಷ್ ಮೆನನ್, ಉಪಾಧ್ಯಕ್ಷ ಸುಜಿತ್ ಸೋಮಸುಂದರ್, ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಮತ್ತಿತರರು ಜತೆಗಿದ್ದರು.





