ಕಾರವಾರ: ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ (ಸುಮೊಟೋ ಕೇಸ್) ದಾಖಲಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂದಿದ್ದಕ್ಕೆ ಕೇಸ್ ದಾಖಲಿಸಿದ್ದು, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಫೆ.23ರಂದು ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂಬ ಪದ ಬಳಕೆ ಮಾಡಿದ್ದರು. ಈ ಹಿನ್ನೆಲೆ ಮುಂಡಗೋಡ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.