ಚಿತ್ರದುರ್ಗ: ಅಂತರ್ಜಾತಿ ವಿವಾಹಕ್ಕೆ ಪೋಷಕರ ಹಾಗೂ ಯುವಕನ ಕುಟುಂಬಸ್ಥರಿಂದ ತೀವ್ರ ವಿರೋಧ ಹಿನ್ನೆಲೆಯಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೂನಬೇವು ಗ್ರಾಮದಲ್ಲಿ ನಡೆದಿದೆ. ವಿಶಾಲಾಕ್ಷಿ (22) ಅಂತರ್ಜಾತಿ ವಿವಾಹಕ್ಕೆ ಬಲಿಯಾದ ಯುವತಿ.
ಮೂರು ವರ್ಷಗಳಿಂದ ಎಸ್ಸಿ ಸಮುದಾಯಕ್ಕೆ ಸೇರಿದ್ದ ವಿಶಾಲಾಕ್ಷಿ, ಎಸ್ಟಿ ಸಮುದಾಯಕ್ಕೆ ಸೇರಿದ ತಿಪ್ಪೇಸ್ವಾಮಿ ಎಂಬಾತನ ಪ್ರೀತಿಸುತ್ತಿದ್ದಳು. ಕಳೆದ ವರ್ಷ ನಾಯಕನಹಟ್ಟಿ ಜಾತ್ರೆಯಲ್ಲಿ ಇಬ್ಬರು ಮದುವೆ ಆಗಿದ್ದರು. ಬಳಿಕ ಹುಡುಗನ ಕಡೆಯವರಿಂದ ಹುಡುಗಿ ಮನೆಯವರಿಗೆ ಜೀವ ಬೆದರಿಕೆ ಶುರುವಾಗಿದೆ.
ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ