ಬೆಳಗಾವಿ: ಚಿಕ್ಕೋಡಿ ತಾಲೂಕಿನ ಜುಗಳ ಗ್ರಾಮದರಾದ ಭರತ ಕಟ್ಟಿ (52) ಅವರು ಭಾನುವಾರ, ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳಾಗಿ ಕಾರ್ಯ ಕಾರ್ಯನಿರ್ವಸುತ್ತಿದ್ದ, ( ಕೆಎಎಸ್) ಭರತ ಕಟ್ಟಿ ಅವರು ಮನೆಯಲ್ಲಿ ಹೃದಯಾಘಾತದಿಂದ ಇಂದು ಕೊನೆಯುಸಿರೆಳಿದ್ದಾರೆ.
ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಭಗವಂತ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳು, ಕುಲಸಚಿವರು, ಕುಲಸಚಿವರು ( ಮೌಲ್ಯಮಾಪನ) ಹಣಕಾಸು ಅಧಿಕಾರಿಗಳು( ಪ್ರಭಾರಿ), ಎಲ್ಲಾ ಅಧಿಕಾರಿ ವೃಂದದವರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಸತಾಂಪ ಸೂಚಿಸಿದ್ದಾರೆ.