ಕಲಬುರಗಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ತಾಲೂಕಿನ ಅವರಾದ (ಬಿ) ಬಳಿ ನಡೆದಿದೆ. ಗುರುನಾಥ್ (46), ಸಂಗೀತಾ (35) ಮೃತ ಮಾವ ಸೊಸೆ.
ಮೃತ ಇಬ್ಬರು ಕಲಬುರಗಿ ತಾಲೂಕಿನ ಬೇಲೂರು ಗ್ರಾಮದ ನಿವಾಸಿಗಳು. ಬೆಳಗ್ಗೆ ಕಲಬುರಗಿಯಿಂದ ಬಸವಕಲ್ಯಾಣಕ್ಕೆ ಬೈಕ್ ಮೇಲೆ ತ್ರಿಬಲ್ ರೈಡ್ ಹೋಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಕಲಬುರಗಿ ಸಂಚಾರಿ- 2 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.