Tuesday, December 24, 2024
Google search engine
Homeಸುದ್ದಿಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್ - ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ...!

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್ – ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ …!

ಬೆಂಗಳೂರು : ಪೊಲೀಸ್​ ಸಿಬ್ಬಂದಿಗಳ ಸುಮಾರು ಮೂರು ವರ್ಷಗಳ ಅಂತರ್ ಜಿಲ್ಲಾ ವರ್ಗಾವಣೆಯ ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್ (Government Green Signal) ನೀಡಿದೆ.

ಪೊಲೀಸ್​ ಸಿಬ್ಬಂದಿಗಳ (police Department) ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹ ಸಚಿವ ಪರಮೇಶ್ವರ್​ ಡಿಜಿ&ಐಜಿಪಿ ಅಲೋಕ್‌ ಮೋಹನ್‌ಗೆ ಸೂಚಿಸಿದ್ದರು.

ಅರ್ಹ ಪತಿ-ಪತ್ನಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿ ಬಂದಿತ್ತು. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೆ ಅಂತರ್​ ಜಿಲ್ಲಾ ವರ್ಗಾವಣೆಯಾಗಿಲ್ಲ.

ಕರ್ನಾಟಕ ಪೊಲೀಸ್ ಇಲಾಖೆ ಸಿಬ್ಬಂದಿಗೆ ನಿರ್ಬಂಧಿತವಾಗಿದ್ದ ಈ ಅಂತರ್ ಜಿಲ್ಲಾ ವರ್ಗಾವಣೆಗೆ ಇತ್ತೀಚೆಗೆ ಅವಕಾಶ ನೀಡಲಾಗಿದೆ. 2022ರಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿತ್ತು. ಆದರೆ ಕೆಲ ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು.

ವರ್ಗಾವಣೆಗೆ ಇರಬೇಕಾದ ಅರ್ಹತೆಗಳೇನು.?

1.ಪೊಲೀಸ್ ಇಲಾಖೆಗೆ ನೇಮಕವಾಗಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರಬೇಕು.
2.ಮಾಜಿ ಯೋಧರು ಸಹ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗಬಹುದು.
3.ಯಾವುದೇ ಒಂದು ಜಿಲ್ಲೆಯಲ್ಲಿ, ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೆ ಅಂತರ್ ಜಿಲ್ಲಾ ವರ್ಗಾವಣೆ ಆಗಿಲ್ಲ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸ್​ ಸಿಬ್ಬಂದಿಯೊಬ್ಬರು ಇತ್ತೀಚೆಗೆ ದಯಾಮರಣ ಕೋರಿ ಸಿಎಂ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿರುವುದನ್ನು ಸ್ಮರಿಸಬಹುದಾಗಿದೆ.

 

RELATED ARTICLES
- Advertisment -spot_img

Most Popular

error: Content is protected !!