Tuesday, December 24, 2024
Google search engine
Homeರಾಜಕೀಯಬಿಜೆಪಿಗೆ  ಬಿಗ್ ಶಾಕ್: ಅಡ್ಡ ಮತ ಚಲಾಯಿಸಿದ ಶಾಸಕ ಎಸ್.ಟಿ ಸೋಮಶೇಖರ್

ಬಿಜೆಪಿಗೆ  ಬಿಗ್ ಶಾಕ್: ಅಡ್ಡ ಮತ ಚಲಾಯಿಸಿದ ಶಾಸಕ ಎಸ್.ಟಿ ಸೋಮಶೇಖರ್

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ. ಎಲೆಕ್ಷನ್ ಏಜೆಂಟ್ ಸುನೀಲ್ ಕುಮಾರ್‌ ಅವರು ಈ ಬಗ್ಗೆ ನ್ಯೂಸ್ ಫಸ್ಟ್‌ಗೆ ಮಾಹಿತಿ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಅಭಿವೃದ್ಧಿಗೆ ನನ್ನ ಮತ ಎಂದಿದ್ದ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ. ಆತ್ಮಸಾಕ್ಷಿಯಾಗಿ ನಾನು ಮತದಾನ ಮಾಡಿದ್ದೇನೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ಅವರು ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯಿಂದಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬಿಜೆಪಿ ನಾಯಕರು ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡಿದ್ದು ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಸೂಚನೆ ನೀಡಿದ್ದರು. ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!