ಬೆಂಗಳೂರು: ಫೆಬ್ರವರಿ 29 ಮಾರ್ಚ 7 ರವರೆಗೆ ನಡೆಯಲ್ಲಿರುವ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಡಾಲಿ ಧನಂಜಯ್ ಅವರನ್ನು ರಾಯಭಾರಿಯಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಹೆಚ್ಚಿನ ಪ್ರಚಾರಕ್ಕಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ ನೇಮಿಸಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಜೆಸಿಂತ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.