Tuesday, December 24, 2024
Google search engine
Homeರಾಜ್ಯವಿಕಲ ಚೇತನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಿಕಲ ಚೇತನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ವಿಕಲ ಚೇತನರ ಬಹುದಿನಗಳ ಪ್ರಮುಖ ಬೇಡಿಕೆಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಥಳದಲ್ಲೇ ಆದೇಶ ಹೊರಡಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ನೀಡಿದ್ದಾರೆ.
ಫ್ರೀಡಂ ಪಾರ್ಕ್‌ನಲ್ಲಿ ವಿಕಲ ಚೇತನರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸಿದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ಪ್ರಮುಖ ಎರಡು ಬೇಡಿಕೆಗಳಿಗೆ ಸ್ಥಳದಲ್ಲೇ ಪರಿಹಾರ ಆದೇಶ ಹೊರಡಿಸಿದ್ದಾರೆ.
ಸ್ಥಳದಲ್ಲೇ ಆದೇಶ ನೀಡಿದ ಸಚಿವರು: 
 ಆದೇಶ: 1: ಹೊಸದಾಗಿ ರಚನೆಗೊಂಡಿರುವ 51 ತಾಲೂಕುಗಳಿಗೆ  ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್ ಡಬ್ಲ್ಯೂ) ನೇಮಕಾತಿ ಮಾಡಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆಗೆ ಶಿಫಾರಸು.

ಆದೇಶ: 2:  ಮಹಿಳಾ ಪುನರ್ವಸತಿ ಕಾರ್ಯಕರ್ತೆಯರಿಗೆ ವೇತನ ಸಹಿತ ಹೆರಿಗೆ ರಜೆ, ಆರು ತಿಂಗಳು, ಗರ್ಭಪಾತ ರಜೆ 45 ದಿನ.
ಮುಂದಿನ ವಾರ ಸಿಎಂ ಜೊತೆ ಚರ್ಚೆ
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಕಲ ಚೇತನರ ಸಮಸ್ಯೆಗಳಿಗೆ ಸರ್ಕಾರ ಶೀಘ್ರವೇ ಪರಿಹಾರ ನೀಡಲಿದೆ. ಈ ಸಂಬಂಧ ಮಾರ್ಚ್ 13 ಅಥವಾ 14 ರಂದು ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ವಿಕಲ ಚೇತನರ ಉಳಿದ ಬೇಡಿಕೆಗಳನ್ನೂ ಈಡೇರಿಸಲಾಗುವುದು ಎಂದು ಸಚಿವರು ಹೇಳಿದರು.
 *ಧರಣಿ ವಾಪಸ್ ಪಡೆದ ಪ್ರತಿಭಟನಾಕಾರರು*
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.
RELATED ARTICLES
- Advertisment -spot_img

Most Popular

error: Content is protected !!