ಬೆಳಗಾವಿ: ಗ್ರಾಮ ಪಂಚಾಯಿತಿಯಲ್ಲಿ ಅನುಕಂಪ ಆಧಾರಿತವಾಗಿ ನೇಮಕಗೊಂಡ ನೌಕರರಿಗೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಆದೇಶಪತ್ರವನ್ನು ವಿತರಿಸಿದರು.
ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ(ಮಾ.1) ನಡೆದ 2023-24 ಸಾಲಿನ ಮೂರನೇ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ಮುಕ್ತಾಯದ ನಂತರ ಗ್ರಾಮ ಪಂಚಾಯತಿಯಲ್ಲಿ ಸೇವೆಯಲ್ಲಿರುವಾಗ ಮೃತಪಟ್ಟ ಸಿಬ್ಬಂದಿಳಾದ ಕರವಸೂಲಿಗಾರ, ಕ್ಲರ್ಕ, ಕ್ಲರ್ಕ ಕಂ. ಡಾಟಾ ಎಂಟ್ರಿ ಆಪರೇಟರ್, ವಾಟರಮೆನ್, ಸಿಪಾಯಿ, ಸ್ವಚ್ಛತಾಗಾರ ರವರ ಅವಲಂಬಿತ ಕುಟುಂಬಗಳಿಗೆ ಅನುಕಂಪ ಆಧಾರದ ಮೇಲೆ
ಒಟ್ಟು 37 ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರು ವಿತರಿಸಿದರು.
ದಿನಾಂಕ: 30-12-2023 ರ ಸರ್ಕಾರದ ಪತ್ರದನ್ವಯ ಹಾಗೂ ದಿನಾಂಕ: 22-02-2024 ರಂದು ಮದ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಸಿ.ಇ.ಒ ರಾಹುಲ್ ಶಿಂಧೆ ಇವರ ಘನ ಅಧ್ಯಕ್ಷತೆಯಲ್ಲಿ ಜರುಗಿದ ಆಯ್ಕೆ ಸಮಿತಿ ಸಭೆಯಲ್ಲಿ ಜಿಲ್ಲೆಯ ಅನುಕಂಪ ಆಧಾರದ ಮೇಲೆ ನೇಮಕಾತಿಗೆ ಸಂಬಂಧಿಸಿದಂತೆ ಪ್ರಸ್ತಾವನೆಗಳನ್ನು ಪರಿಶೀಲಿಸಿ ಅರ್ಹ 37 ಅಭ್ಯರ್ಥಿಗಳನ್ನು ಆಯ್ಕೆ ಸಮಿತಿ ಸದಸ್ಯರುಗಳಾದ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳು (ಆಡಳಿತ), ಸಮಾಜ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಅಧಿಕಾರಿಗಳು. ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಅಧ್ಯಕ್ಷರ ಸಮ್ಮುಖದಲ್ಲಿ ಆಯ್ಕೆ ಮಾಡಿ ನೇಮಕಾತಿ ಆದೇಶ ನೀಡಲಾಗಿತ್ತು.
ತಾಲ್ಲೂಕು ಅನುಕಂಪ ಆಧಾರದ ಮೇಲೆ ನೇಮಕಾತಿಯಾದ ಸಿಬ್ಬಂದಿಗಳ ವಿವರ
1 ಅಥಣಿ – 6
2 ಬೆಳಗಾವಿ – 6
3 ಸವದತ್ತಿ -5
4 ಖಾನಾಪೂರ -2
5 ಬೈಲಹೊಂಗಲ -3
6 ರಾಮದುರ್ಗ -4
7 ಮೂಡಲಗಿ – 1
8 ಕಿತ್ತೂರ – 1
9 ರಾಯಬಾಗ – 2
10 ಗೋಕಾಕ – 1
11 ಹುಕ್ಕೇರಿ – 3
12 ಚಿಕ್ಕೋಡಿ – 3
ಒಟ್ಟು 37 ಸಿಬ್ಬಂದಿಗಳಿಗೆ ಆದೇಶ ಪ್ರತಿಯನ್ನು ವಿತರಿಸಿದರು.
ರಾಯಬಾಗ ಶಾಸಕರಾದ ದುರ್ಯೋಧನ ಐಹೊಳೆ, ಬೆಳಗಾವಿ(ಉತ್ತರ) ಶಾಸಕ ಆಸಿಫ್(ರಾಜು) ಸೇಠ್, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಖಾನಾಪುರ ಶಾಸಕ ವಿಠ್ಠಲ ಹಲಗೇಕರ್, ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ ಸಿ.ಇ.ಒ ರಾಹುಲ್ ಶಿಂಧೆ, ಜಿಲ್ಲಾ ಪಂಚಾಯತ ಅಧಿಕಾರಿಗಳಾದ ಉಪ ಕಾರ್ಯದರ್ಶಿಗಳು ಆಡಳಿತ ರೇಖಾ ಡೊಳ್ಳಿನವರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳು ಅಭಿವೃದ್ಧಿ ಬಸವರಾಜ ಅಡವಿಮಠ, ಮುಖ್ಯ ಲೆಕ್ಕಾಧಿಕಾರಿಗಳಾದ ಪರಶುರಾಮ ದುಡಗುಂಟಿ, ಮುಖ್ಯ ಯೋಜನಾಧಿಕಾರಿಗಳಾದ ಗಂಗಾಧರ ದಿವಟರ್, ಸಂಬಂಧಪಟ್ಟ ಗ್ರಾಮ ಪಂಚಾಯತ ಅಧ್ಯಕ್ಷರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.