ಕಡಬ: ದಕ್ಷಿಣಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿರುವ ಕೃತ್ಯ ಸೋಮವಾರ (ಮಾ.4) ಬೆಳಿಗ್ಗೆ ನಡೆದಿದೆ.
ಕಡಬ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಮೂವರು ವಿದ್ಯಾರ್ಥಿನಿಯರು ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಮಾಸ್ಕ್ ಹಾಗೂ ಹ್ಯಾಟ್ ಧರಿಸಿ ಬಂದ ದುಷ್ಕರ್ಮಿ ಏಕಾಏಕಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ.
ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಆಸಿಡ್‌ನಿಂದ ಗಂಭೀರ ಗಾಯಗಳಾಗಿದ್ದು, ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಕೇರಳದ ಮಲ್ಲಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂಬಿಎ ವಿದ್ಯಾರ್ಥಿ ಅಬೀನ್ ಎಂದು ತಿಳಿದುಬಂದಿದೆ. ಆರೋಪಿ ಅಬೀನ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರೇಮ ವೈಫಲ್ಯವೇ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ.”