ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. ಒಂದಿಷ್ಟು ದಿನಗಳಿಂದ ಸತತ ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಗಾಬರಿ ಪಡಿಸಿತ್ತು ಹಳದಿ ಲೋಹದ ಬೆಲೆ. ಇದೀಗ ತುಸು ಇಳಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಇಳಿಯಬಹುದೋ ಅಥವಾ ಬೆಲೆ ಏರಿಕೆಯಾಗಬಹುದೋ ಎಂದು ಗ್ರಾಹಕರು ಚಿಂತಿಸುತ್ತಿದ್ದಾರೆ. ಈ ನಡುವೆ ಬೆಳ್ಳಿ ದರ ತುಸು ಏರಿಕೆಯಾಗಿದೆ. ಕರ್ನಾಟಕ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಇಂದು ಚಿನ್ನದ ದರ ಎಷ್ಟಿದೆ ಗಮನಿಸಿ.
22 ಕ್ಯಾರೆಟ್ ಚಿನ್ನದ ಬೆಲೆ
ಇಂದು 1 ಗ್ರಾಂ ಚಿನ್ನಕ್ಕೆ 6,074 ರೂ. ಆಗಿದೆ. ನಿನ್ನೆ 6,075 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 1 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 48,592 ರೂ. ನೀಡಬೇಕು. ನಿನ್ನೆ 48,600 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 8 ರೂ. ಕಡಿಮೆಯಾಗಿದೆ. 10 ಗ್ರಾಂ ಚಿನ್ನಕ್ಕೆ 60,740 ರೂ ಆಗಿದೆ. ನಿನ್ನೆ 60,750 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 10 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,07,400 ರೂ. ನೀಡಬೇಕು. ನಿನ್ನೆ 6,07,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 100 ರೂ. ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ
24 ಕ್ಯಾರೆಟ್ ಚಿನ್ನಕ್ಕೆ 1 ಗ್ರಾಂಗೆ 6,626 ರೂ. ಆಗಿದೆ. ನಿನ್ನೆ 6,627 ರೂ. ಇದು ಈ ದರಕ್ಕೆ ಹೋಲಿಸಿದರೆ 1 ರೂ ಕಡಿಮೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 53,008 ರೂ. ನೀಡಬೇಕು. ನಿನ್ನೆ 53,016 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 8 ರೂ. ಕಡಿಮೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 66,260 ನೀಡಬೇಕು. ನಿನ್ನೆ 66,270 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 10 ರೂ ಕಡಿಮೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 6,62,600 ರೂ. ಇದೆ. ನಿನ್ನೆ 6,62,700 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 100 ರೂ ಕಡಿಮೆಯಾಗಿದೆ.
ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 60,740 ರೂ. ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 66,260 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.
ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)
ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 61,490 ರೂ. 24 ಕ್ಯಾರೆಟ್‌ಗೆ 67,090 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 60,740 ರೂ. 24 ಕ್ಯಾರೆಟ್‌ಗೆ 66,260 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 60,890 ರೂ. 24 ಕ್ಯಾರೆಟ್‌ಗೆ 66,410 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 60,740 ರೂ. 24 ಕ್ಯಾರೆಟ್‌ಗೆ 66,260 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 60,740 ರೂ. ಇದ್ದರೆ, 24 ಕ್ಯಾರೆಟ್‌ಗೆ 66,260 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 60,740 ರೂ. 24 ಕ್ಯಾರೆಟ್‌ಗೆ 66,260 ರೂ. ಆಗಿದೆ.
ಬೆಳ್ಳಿ ದರ
ಬೆಳ್ಳಿ ದರ ಕೊಂಚ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 75 ರೂ. ಇದೆ. 8 ಗ್ರಾಂಗೆ 600 ರೂ ಇದ್ದರೆ, 10 ಗ್ರಾಂಗೆ 750 ರೂ. ಇದೆ. 100 ಗ್ರಾಂಗೆ 7,500 ರೂ. ಹಾಗೂ 1 ಕಿಲೋಗೆ 75,000 ರೂ. ಬೆಲೆ ನಿಗದಿ ಆಗಿದೆ.