ಬೆಳಗಾವಿ: ಜಿಪಂ ಸಿಇಒ ರಾಹುಲ್ ಶಿಂಧೆ ಅವರ ನಿರ್ದೇಶನದಂತೆ ಗುರುವಾರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಸವರಾಜ ಕುರಿಹುಲಿ ಹಾಗೂ ಖಾನಾಪೂರ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ. ಆರ್ ನಾಗನೂರ ಅವರು ಖಾನಾಪೂರ ತಾಲ್ಲೂಕಿನ ಭೂರಣಕಿ ಗ್ರಾಮದಲ್ಲಿ ವಾಸವಿರುವ ಸಿದ್ದಿ ಜನಾಂಗದ ಕಾಲೋನಿಗೆ ಭೇಟಿ ನೀಡಿದ ಅವರು ಕುಂದು ಕೊರತೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು.
ಈ ವೇಳೆ ಮೂಲಭೂತ ಸೌಕರ್ಯಗಳಾದ ಮನೆ, ಕಾಲೋನಿಗೆ ನೀರಿನ ವ್ಯವಸ್ಥೆ, ವ್ಯವಸಾಯಕ್ಕಾಗಿ ಸರಕಾರದಿಂದ ಭೂಮಿ, ಮಕ್ಕಳಿಗಾಗಿ ಒಳ್ಳೆಯ ಶಿಕ್ಷಣ, ಹಾಸ್ಟೇಲ್ ವ್ಯವಸ್ಥೆ, ಕ್ರೀಡಾ ಚಟುವಟಿಕೆಗಳಿಗಾಗಿ ಕ್ರೀಡಾ ಹಾಸ್ಟೇಲ್ ವ್ಯವಸ್ಥೆ ಹಾಗೂ ಆಸ್ಪತ್ರೆ ಮೊದಲಾದ ಸೌಲಭ್ಯಗಳನ್ನು ಕಲ್ಪಿಸುವಂತೆ ಭೂರಣಕಿ ಗ್ರಾಮದಲ್ಲಿ ವಾಸವಿರುವ ಸಿದ್ದಿ ನಿವಾಸಿಗಳು ಮನವಿ ಮಾಡಿದರು.
ಜಿಲ್ಲಾ ಪರಿಶಿಷ್ಟ ಕಲ್ಯಾಣ ಅಧಿಕಾರಿ ಬಸವರಾಜ ಕುರಿಹುಲಿ ಅವರು ಇದಕ್ಕೆ ಪ್ರತಿಕ್ರಿಯಿಸಿ ನಿಮ್ಮ ಎಲ್ಲ ಬೇಡಿಕೆಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಲಾಗುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಸೇರಿದಂತೆ ಸಮಾಜದ ಪ್ರಮುಖರು ಹಾಜರಿದ್ದು.